ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರಿಗೆ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 26. ಚುನಾವಣೆ ಸಂದರ್ಭದಲ್ಲಿ ಸಹಾಯಕ ಚುನಾವಣಾ ನೋಂದಣಾಧಿಕಾರಿಯಾಗಿ ಉತ್ತಮ ಕಾರ್ಯ ನಿರ್ವಹಣೆಗೈದ ಹಿನ್ನೆಲೆ ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ರವರು 2021-22ನೇ ಸಾಲಿನ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್ ಮುಡಿಗೇರಿಸಿಕೊಂಡಿದ್ದಾರೆ.

ಕಳೆದ 2011ರಿಂದ ರಾಷ್ಟ್ರೀಯ ಮತದಾರರ ದಿನದಂದು ಈ ಪ್ರಶಸ್ತಿಯನ್ನು ಚುನಾವಣಾ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿಗಳಿಗೆ ರಾಜ್ಯಪಾಲರ ಉಪಸ್ಥಿತಿಯಲ್ಲಿ ನೀಡಲಾಗುತ್ತಿತ್ತು. ಆದರೆ ಕೊರೋನಾ ಹಿನ್ನೆಲೆ ಈ ಬಾರಿ ರಾಜ್ಯಪಾಲರ ಕಾರ್ಯದರ್ಶಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಶಸ್ತಿ ಪ್ರದಾನ ನಡೆದಿದೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಹಿತ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ರ ಸಹಿಯುಳ್ಳ ಪ್ರಮಾಣಪತ್ರವನ್ನು ತಹಶಿಲ್ದಾರ್ ರಶ್ಮಿ ಅವರಿಗೆ ನೀಡಿ ಗೌರವಿಸಲಾಯಿತು.

Also Read  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

 

error: Content is protected !!
Scroll to Top