ಮಂಗಳೂರು: ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ➤ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಅಮೈ ಮಹಾಲಿಂಗ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 26. ದ.ಕ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ನೆಹರೂ ಮೈದಾನದಲ್ಲಿ ಆಚರಿಸಲಾಯಿತು.

ಧ್ವಜಾರೋಹಣವನ್ನು ನೆರವೇರಿಸಿದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Also Read  *ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ          

 

error: Content is protected !!
Scroll to Top