Breaking News ➤ ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

(ನ್ಯೂಸ್ ಕಡಬ) newskadaba.com ಕಡಬ, ಜ. 26. ಇಲ್ಲಿನ ಅರಣ್ಯ ಪ್ರದೇಶದ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ ಪರಿಣಾಮ ತಲೆ ಹಾಗೂ ಸೊಂಟಕ್ಕೆ ಗಂಭೀರ ಗಾಯವಾದ ಘಟನೆ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ನಡೆದಿದೆ.


ಗಾಯಗೊಂಡ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೇವಪ್ಪ ಎಂದು ಗುರುತಿಸಲಾಗಿದೆ. ಇವರು ನೆಡುತೋಪಿನಲ್ಲಿ ಗಿಡ ನೆಡುವ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು ಭೇಟಿ ನೀಡಿ, ತಕ್ಷಣವೇ ವ್ಯಕ್ತಿಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Also Read  ಅರಂತೋಡು: ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ 16ನೇ ವರ್ಷದ ಇಫ್ತಾರ್ ಕಿಟ್ ವಿತರಣೆ

 

error: Content is protected !!
Scroll to Top