ಗೋಕಳ್ಳರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ➤ ಸಚಿವ ವಿ.ಸುನಿಲ್ ಕುಮಾರ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 27. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಗೋಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕೃತ್ಯವೆಸಗುವವರು ಹಾಗೂ ಕೃತ್ಯಕ್ಕೆ ಸಹಕರಿಸುವವರನ್ನು ಪತ್ತೆಹಚ್ಚಿ ಅವರು ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರು ಪೊಲೀಸರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.


ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು, ಚೆಕ್ ಪೋಸ್ಟ್ ಗಳಲ್ಲಿ ನಿಗಾ ಇರಿಸಬೇಕು, ಗೋಕಳ್ಳತನದಲ್ಲಿ ಈ ಹಿಂದೆ ಭಾಗಿಯಾದವರನ್ನು ಕರೆದು ತನಿಖೆ ನಡೆಸಿ, ಸಂಶಯ ಇದ್ದವರನ್ನು ತೀವ್ರ ತನಿಖೆಗೆ ಒಳಪಡಿಸಬೇಕು, ಇನ್ನು ಮುಂದೆ ಜಿಲ್ಲೆಯಲ್ಲಿ ಯಾವುದೇ ಗೋಕಳ್ಳತನದಂತಹ ಕೃತ್ಯಗಳು ನಡೆಯದ ಹಾಗೆ ಎಚ್ಚರ ವಹಿಸಬೇಕು ಎಂದು ಹೇಳಿದರು.

Also Read  ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…!

 

error: Content is protected !!
Scroll to Top