ಕಾರಿಗೆ ಢಿಕ್ಕಿ ಹೊಡೆದ ಲಾರಿ ➤ ಇಬ್ಬರು ದುರ್ಮರಣ…!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 27. ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಚೇನಹಳ್ಳಿ ಎಂಬಲ್ಲಿ ನಡೆದಿದೆ.


ಮೃತರನ್ನು ಷಣ್ಮುಖ ಹಾಗೂ ರಾಮಚಂದ್ರ ಎಂದು ಗುರುತಿಸಲಾಗಿದೆ. ಇವರಿಬ್ಬರು ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಲಾರಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  2022 ರಲ್ಲಿ 185 ಸೈಬರ್ ಕ್ರೈಮ್ ಪ್ರಕರಣ ದಾಖಲು- ಆರೋಪಿಗಳಿಗೆ ಇದುವರೆಗೆ ಶಿಕ್ಷೆಯಾಗಿಲ್ಲ ➤ ಗೃಹಸಚಿವ ಆರಗ ಜ್ಞಾನೇಂದ್ರ

 

 

error: Content is protected !!
Scroll to Top