ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 27. ಇಲ್ಲಿನ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹವೊಂದು ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಸ್ಥಳೀಯ ನಾಡದೋಣಿ ನಾವಿಕ ಮಹಮ್ಮದ್ ಗೂಡಿನಬಳಿ ಅವರ ತಂವು ಮೃತದೇಹವನ್ನು ನದಿಯಿಂದ ಮೇಲಕ್ಕೆ ಎತ್ತಿ ಹಾಕಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರ ಗುರುತು ಪತ್ತೆಯಾಗದ ಹಿನ್ನಲೆ ಪೋಲೀಸರು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.

 

 

Also Read  ಈದ್ ಮೀಲಾದ್ ಮಾರ್ಗಸೂಚಿ ➤ ಮೆರವಣಿಗೆ, ಗುಂಪು ಸೇರುವಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಸೂಚನೆ

error: Content is protected !!
Scroll to Top