ಅಸಭ್ಯ ವರ್ತನೆ ➤ ಆಟೋ ರಿಕ್ಷಾದಲ್ಲಿದ್ದ ವ್ಯಕ್ತಿಯನ್ನು ಹೊರೆಗೆಳೆದು ಹಿಗ್ಗಾಮುಗ್ಗ ಥಳಿಸಿದ ಮಹಿಳೆ..!

(ನ್ಯೂಸ್ ಕಡಬ) newskadaba.com ತುಮಕೂರು, ಜ. 28. ಆಟೋದಲ್ಲಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯೋರ್ವಳು ಹಿಗ್ಗಾಮುಗ್ಗ ಥಳಿಸಿರುವ ಘಟನೆ ತುಮಕೂರಿನ ಕೋಡಿ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ.

 

ಮಹಿಳೆಯು ತುಮಕೂರಿನಿಂದ ಶಿರಾಗೇಟ್​​​​​​ಗೆ ತೆರಳುತ್ತಿದ್ದ ವೇಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಮಹಿಳೆಯ ಮೈಗೆ ಕೈ ಹಾಕಿದ್ದು, ಇದರಿಂದ ಕೋಪಗೊಂಡ ಮಹಿಳೆ ಆತನನ್ನು ಹೊರ ಎಳೆದು ಸಾರ್ವಜನಿಕವಾಗಿ ಥಳಿಸಿದ್ದಾಳೆ. ಈ ವೇಳೆ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಲು ಮುಂದಾದಾಗ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Also Read  ಬಿಜೆಪಿಗೆ ಗುಡ್ ಬೈ ಹೇಳಿ ಹೊಸ ಪಕ್ಷ ಸ್ಥಾಪಿಸಿದ ಜನಾರ್ಧನ ರೆಡ್ಡಿ

 

 

 

error: Content is protected !!
Scroll to Top