ತಾಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 28. ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ.

 

 


ಮೃತರನ್ನು ಕೆದ್ದೇಲು ನಿವಾಸಿ ಪ್ರಕಾಶ್ ಎಂದು ಗುರುತಿಸಲಾಗಿದೆ. ಇವರು ಕಳೆದ ಇಪ್ಪತ್ತು ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಇವರು ಗುರುವಾರದಂದು ತಾಳೆ ಮರಕ್ಕೆ ಹತ್ತಿದ್ದು ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದನ್ನು ಕಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದಾಗ ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಪ್ರಕಾಶ್ ಅವರು ಅದಾಗಲೇ ಮೃತಪಟ್ಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Also Read  ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ

 

 

 

 

 

 

error: Content is protected !!
Scroll to Top