ದ.ಕ. ಜಿಲ್ಲಾ ಎನ್ಎಸ್.ಯು.ಐ ಅಧ್ಯಕ್ಷರಾಗಿ ಎರಡನೇ ಬಾರಿಗೆ ಸವಾದ್ ಸುಳ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಎನ್ ಎಸ್ ಯುಐ ದ.ಕ. ಜಿಲ್ಲಾ ನೂತನ ಅಧ್ಯಕ್ಷರಾಗಿ ಸವಾದ್ ಸುಳ್ಯ ಅವರನ್ನು ನೇಮಕಗೊಳಿಸಿ ಕೂಡಲೇ ಜಾರಿಗೆ ಬರುವಂತೆ ರಾಷ್ಟ್ರೀಯ ಎನ್ ಎಸ್ ಯುಐ ಕಾರ್ಯದರ್ಶಿ ಎರಿಕ್ ಸ್ಟೀಫನ್ ಮತ್ತು ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರ ಆದೇಶ ಹೊರಡಿಸಿದ್ದಾರೆ.

 

 

 


ಮಹಮ್ಮದ್ ಸವಾದ್ ಅವರು ವಿಧ್ಯಾರ್ಥಿ ದೆಸೆಯಿಂದಲೇ ಸಂಘಟನೆ ಮತ್ತು ವಿದ್ಯಾರ್ಥಿಗಳ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ಪ್ರೌಢ ಶಾಲೆಯಲ್ಲಿರುವಾಗಲೇ ಎನ್ ಎಸ್ ಯುಐ ವಿದ್ಯಾರ್ಥಿ ನಾಯಕನಾಗಿ, ಕಾಲೇಜು ಘಟಕದ ಅಧ್ಯಕ್ಷನಾಗಿ, ಸುಳ್ಯ ನಗರ ಅಧ್ಯಕ್ಷನಾಗಿ, ಜಿಲ್ಲಾ ಸಂಯೋಜಕನಾಗಿ, ರಾಜ್ಯ ಚುನಾಯಿತ ಕಾರ್ಯದರ್ಶಿಯಾಗಿ, ಪ್ರಸ್ತುತ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ವಿದ್ಯಾರ್ಥಿಗಳ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಅವರು ಸಾಮಾಜಿಕ ಸಂಘಟನೆಯಲ್ಲಿ ತನ್ನ ಛಾಪನ್ನು ಮೂಡಿಸಿದ್ದಾರೆ. ಕೋರೋನಾ ವಾರಿಯರ್ಸ್ ಆಗಿ ಕೆಲಸ ಮಾಡಿರುವ ಅವರು, ಡ್ರಗ್ಸ್ ವಿರುದ್ಧ ಜಿಲ್ಲಾದ್ಯಂತ ಅಭಿಯಾನವನ್ನು ಕೂಡಾ ಮಾಡಿದ್ದಾರೆ. ಅಲ್ಲದೇ, ಎನ್ ಎಸ್ ಯುಐ ಆಯೋಜಿಸಿದ ರಾಷ್ಟ್ರೀಯ ಮತ್ತು ರಾಜ್ಯ ಶಿಬಿರಗಳಲ್ಲಿ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿದ್ದರು.

Also Read  ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು

 

 

 

 

 

 

error: Content is protected !!
Scroll to Top