ನೆಲ್ಯಾಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 28. ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ರುದ್ರಮಜಲು ನಿವಾಸಿ ನಂದಕುಮಾರ್(19) ಎಂದು ಗುರುತಿಸಲಾಗಿದೆ. ಪ್ರಥಮ ಬಿ.ಕಾಂ.ವಿದ್ಯಾಥಿಯಾಗಿದ್ದ ಈತ ನಾಲ್ಕು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಎರಡು ದಿನಗಳ ಹಿಂದೆ ದಿಢೀರನೇ ತೀವ್ರ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಗೆ ಸ್ಪಂದಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Also Read  ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ 'ಅಬಾಕಸ್' ಗಣಿತ ತರಗತಿ ಉದ್ಘಾಟನೆ

 

 

error: Content is protected !!
Scroll to Top