ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ➤ ಸ್ಯಾಂಡಲ್ ವುಡ್ ನಿರ್ಮಾಪಕನ ಬಂಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಸ್ಯಾಂಡಲ್ವುಡ್ ನಟಿಯೋರ್ವರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆ ಸ್ಯಾಂಡಲ್ ವುಡ್ ನಿರ್ಮಾಪಕರೋರ್ವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.


ಬಂಧಿತರನ್ನು ವಿಷನ್ 2023 ಸಿನಿಮಾದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ ಎಂದು ಗುರುತಿಸಲಾಗಿದೆ. ಈತ ಕನ್ನಡ ಸಿನಿಮಾಗಳಲ್ಲಿ ಸಹನಟಿಯಾಗಿ ನಟಿಸುತ್ತಿದ್ದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಎರಡು ವರ್ಷಗಳಿಂದ ನಿರಂತರ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಇದೀಗ ಮದುವೆ ಮಾಡಿಕೊಳ್ಳುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾನೆ ಎಂದು ಹರ್ಷವರ್ಧನ್ ವಿರುದ್ದ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನೀಡಿದ ದೂರಿನಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Also Read  ಗೌರಿ - ಗಣೇಶ ಚತುರ್ಥಿಯ ಶುಭ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

error: Content is protected !!
Scroll to Top