(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ರಾಜ್ಯ ಗಣಿ ಹಾಗೂ ಭೂವಿಜ್ಞಾನ ಮತ್ತು ಮಕ್ಕಳ ಮಹಿಳಾ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯ ಮಂತ್ರಿ ಹಾಲಪ್ಪ ಆಚಾರ್ ಅವರು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.
ಈ ಸಂದರ್ಭದಲ್ಲಿ ಪ್ರಾಚೀನ ತೀರ್ಥಕ್ಷೇತ್ರ ನರಹರಿ ಪರ್ವತದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ದೇವಸ್ಥಾನದ ಪವಿತ್ರತೆಗೆ ಧಕ್ಕೆಯಾಗುತ್ತಿರುವ ಹಿನ್ನೆಲೆ ಅಲ್ಲಿ ಗಣಿಗಾರಿಕೆ ನಿಲ್ಲಿಸುವಂತೆ ಸಚಿವರಿಗೆ ಲಿಖಿತ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಚಾರ್, ಕೂಡಲೇ ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ಸೂಕ್ತ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದರು.