ಸೇತುವೆ ಮೇಲಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 29. ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ಶನಿವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಬಂಟ್ವಾಳ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಎಂದು ಗುರುತಿಸಲಾಗಿದೆ. ಪ್ರಗತಿಪರ ಕೃಷಿಕರಾಗಿದ್ದ ಇವರು, ಇಂದು ಬೆಳಗ್ಗೆ ಮನೆಯಿಂದ ಹೊರಟ ಅವರು ಪಾಣೆಮಂಗಳೂರು ಕಿರುಸೇತುವೆ ಬಳಿ ನೀರಿಗೆ ಹಾರಿದ್ದಾರೆ. ಸ್ಥಳೀಯರು ಇದನ್ನು ಗಮನಿಸಿ ಮಾಹಿತಿ ನೀಡಿದ್ದು, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Also Read  ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ  ➤ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು                  

error: Content is protected !!
Scroll to Top