ಜ. 31ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ರದ್ದು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ರಾಜ್ಯದ ಜ. 31ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇನ್ನು ಮುಂದೆ ದೇವಾಲಯ, ಮಸೀದಿ, ಚರ್ಚ್ ಗಳಲ್ಲಿ ಎಲ್ಲಾ ಧಾರ್ಮಿಕ ಸೇವೆಗಳಿಗೆ ಅವಕಾಶವಿದ್ದು, ಆದರೆ ಏಕಕಾಲಕ್ಕೆ 50 ಜನರಿಗಷ್ಟೇ ಸೇರಲು ಅವಜಾಶವಿದೆ. ಸಿನಿಮಾ ಥಿಯೇಟರ್ ಗಳಲ್ಲಿ ಶೆ. 50ರ ನಿಯಮ ಜಾರಿಗೊಳಿಸಲು ನಿರ್ಧಾರಿಸಲಾಗಿದೆ. ಧರಣಿ, ಜಾತ್ರೆ ಹಾಗೂ ಪ್ರತಿಭಟನೆಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ. ಕಛೇರಿಗಳಲ್ಲಿ ಶೆ.‌100 ಸಿಬ್ಬಂದಿಯೊಂದಿಗೆ ಕಾರ್ಯಾಚರಿಸಲು ಅವಕಾಶವಿದೆ. ಹೋಟೆಲ್, ಪಬ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

Also Read  ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು - ರಾಮಕೃಷ್ಣ ರೈ

error: Content is protected !!
Scroll to Top