ನಾಳೆ (ಜ. 30) ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟನೆ..!

(ನ್ಯೂಸ್ ಕಡಬ) newskadaba.com ಕಡಬ, ಜ. 29. ದ.ಕ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂ., ಕಡಬ ಪ.ಪಂ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪುತ್ತೂರು ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಇದರ ಸಹಯೋಗದಲ್ಲಿ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಲಾದ ಆಕ್ಸಿಜನ್ ಉತ್ಪಾದನಾ ಘಟಕ ಇದರ ಉದ್ಘಾಟನೆಯು ನಾಳೆ (ಜ.30) ನಡೆಯಲಿದೆ.

ಇದರ ಉದ್ಘಾಟನೆಯನ್ನು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಶ್ರೀ.ಎಸ್. ಅಂಗಾರ ಅವರು ನೆರವೇರಿಸಲಿದ್ದಾರೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ. ಸುನಿಲ್ ಕುಮಾರ್, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ನಳಿನ್ ಕುಮಾರ್ ಕಟೀಲ್ ಲೋಕಸಭಾ ಸದಸ್ಯರು, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಬಿ.ಎಂ ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್.ಬೋಜೇಗೌಡ, ಪ್ರತಾಪ್ ಸಿಂಹ ನಾಯಕ್ ಕೆ, ಮಂಜುನಾಥ್ ಭಂಡಾರಿ, ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಸಹಾಯಕ ಆಯುಕ್ಯ ಯತೀಶ್ ಉಳ್ಳಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಿಶೋರ್ ಕುಮಾರ್ ಎಂ, ಕಡಬ ತಹಶೀಲ್ದಾರ್ ಅನಂತ ಶಂಕರ್ ಹಾಗೂ ಪ.ಪಂ ಮುಖ್ಯಾಧಿಕಾರಿ ಪಕೀರ ಮೂಲ್ಯ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Also Read  ಕೊನೆಯ ಕ್ಷಣದಲ್ಲಿ ಅತಿವೃಷ್ಟಿ/ಪ್ರವಾಹ ಪೀಡಿತ ಪಟ್ಟಿಯಲ್ಲಿ ಸುಳ್ಯ ತಾಲೂಕು ಘೋಷಣೆ

error: Content is protected !!
Scroll to Top