(ನ್ಯೂಸ್ ಕಡಬ) newskadaba.com ಕಡಬ, ಜ. 31. ಕಡಬ ಸಮುದಾಯ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಆರೋಗ್ಯ ಸಚಿವರಿಗೆ ಮನವಿ ನೀಡಲಾಗಿದ್ದು, ಈ ಬಗ್ಗೆ ಶೀಘ್ರವಾಗಿ ಕ್ರಮ ವಹಿಸಲಾಗುವುದು ಎಂದು ಸಚಿವ ಎಸ್. ಅಂಗಾರ ಅವರು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೇಗೇರಬೇಕಾದರೆ ಕೆಲವೊಂದು ನಿಯಾಮವಳಿಗಳಿವೆ, ವೈದ್ಯರು ಹಾಗೂ ಸಿಬ್ಬಂದಿಗಳ ನೇಮಕ ಆಗಬೇಕಿದೆ. ಈ ನಿಟ್ಟಿನಲ್ಲಿ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಕೋವಿಡ್ ಬಳಿಕ ಆಕ್ಸಿಜನ್ ಕೊರತೆಯನ್ನು ಸವಾಲಾಗಿ ಸ್ವೀಕರಿಸಿ ಅಗತ್ಯ ಕ್ರಮಗಳನ್ನು ಸರಕಾರ ಕೈಗೊಂಡಿದೆ. ಈಗಾಗಲೇ ಜಿಲ್ಲೆಯಲ್ಲಿ 16 ಕಡೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ನಿರ್ಮಿಸಲಾಗಿದೆ. ವ್ಯಾಕ್ಸಿನೇಶನ್ ಪಡೆಯಲು ಬಾಕಿ ಇದ್ದವರು ಕೂಡಲೇ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ|ಕಿಶೋರ್ ಕುಮಾರ್ ಎಂ. ಮಾತನಾಡಿ, ಕಡಬ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೇಗೇರಿಸಲು ಪ್ರೊಪೋಸಲ್ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ 16 ಕಡೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳು ನಿರ್ಮಾಣವಾಗಲಿದ್ದು, ಇದರಲ್ಲಿ ಕಡಬವು 15ನೇ ಘಟಕವಾಗಿದೆ ಎಂದರು. ಭಾರತೀಯ ಸ್ಟೇಟ್ ಬ್ಯಾಂಕ್‌ನ ಕಡಬ ಶಾಖೆಯ ವ್ಯವಸ್ಥಾಪಕ ಅಹ್ಮದ್ ಮಸೂರ್, ಕಡಬ ತಹಶೀಲ್ದಾರ್ ಬಿ.ಅನಂತ ಶಂಕರ್ ಅವರು ಮಾತನಾಡಿ ಶುಭ ಹಾರೈಸಿದರು. ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ, ಜಿ.ಪಂ. ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಕೃಷ್ಣ ಶೆಟ್ಟಿ, ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸೈಯದ್ ಮೀರಾ ಸಾಹೇಬ್, ಎ.ಪಿ.ಎಂ.ಸಿ.ಸದಸ್ಯರಾದ ಪುಲಸ್ತ್ಯ ರೈ, ಮೇದಪ್ಪ ಗೌಡ ಡೆಪ್ಪುಣಿ ಸೇರಿದಂತೆ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಪತ್ರಕರ್ತ ನಾಗರಾಜ್ ಎನ್.ಕೆ ಕಾರ್ಯಕ್ರಮ ನಿರೂಪಿಸಿದರು.