ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಬಸ್ ಚಾಲಕನ ಬಂಧನ…!



(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂಬಂಧಿಸಿ ಬಸ್ ಚಾಲಕನನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.







ಬಂಧಿತನನ್ನು ಬಾಗಲಕೋಟೆ ಮೂಲದ ದಯಾನಂದ(32) ಎಂದು ಗುರುತಿಸಲಾಗಿದೆ. ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ, 13 ವರ್ಷದ ಬಾಲಕಿಯನ್ನು ನಿರ್ಜನ‌ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಕುರಿತು ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೋಕ್ಸೊ ಪ್ರಕರಣದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.






 

error: Content is protected !!
Scroll to Top