➤➤ Breaking News ನೆಲ್ಯಾಡಿ: ಲಾರಿ ಹಾಗೂ ಇನೋವಾ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ಪ್ರಯಾಣಿಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 31. ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಸೋಮವಾರದಂದು ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಮಂಗಳೂರು: ಜ.16 ರಂದು ಬಡವರಿಗೆ‌ ಲಾಟರಿ ಮೂಲಕ ಫ್ಲ್ಯಾಟ್ ಹಂಚಿಕೆ

error: Content is protected !!
Scroll to Top