ನೆಲ್ಯಾಡಿ: ಬೈಕ್- ಓಮ್ನಿ ಕಾರು ನಡುವೆ ಢಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 31. ಬೈಕ್ ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.


ಗಾಯಗೊಂಡವರನ್ನು ಪಡುಬೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಈತ ಸ್ನೇಹಿತನ ಕಾರಿನಲ್ಲಿ ಪೆಟ್ರೋಲ್ ಖಾಲಿಯಾಗಿದೆ ಎಂದು ಕರೆ ಬಂದ ಹಿನ್ನೆಲೆ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನೆಲ್ಯಾಡಿ ಹೈಸ್ಕೂಲ್ ಬಳಿ ಓಮ್ನಿ ಕಾರು ನಡುವೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರೀಟೇಲರ್ಸ್‌ರಿಂದ ಪ್ರತಿಭಟನೆ 

 

 

 

error: Content is protected !!
Scroll to Top