ಕ್ಯಾಂಪಸ್ ಫ್ರಂಟ್ ವತಿಯಿಂದ ಉಡುಪಿಯಲ್ಲಿ ವಿಶ್ವ ಹಿಜಾಬ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.‌ 02. ವಿಶ್ವ ಹಿಜಾಬ್ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿಯ ದುರ್ಗಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.


ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಆಯಿಶಾ ಮುರ್ಶಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ, ಇಂದು ಹಿಜಾಬ್ ಮುಸ್ಲಿಂ ಮಹಿಳೆಯರ ಘನತೆ ಹಾಗೂ ರಕ್ಷಣೆಯ ಕವಚವಾಗಿದೆ. ಆದರೆ ಸಂಘ ಪರಿವಾರ ಇಂದು ತನ್ನ ರಾಜಕೀಯ ಷಡ್ಯಂತ್ರದ ಭಾಗವಾಗಿ ಮುಸ್ಲಿಂ ಮಹಿಳೆಯರ ಶಿಕ್ಷಣವನ್ನು ಮೊಟಕುಗೊಳಿಸುವ ಹುನ್ನಾರವಿದೆ ಎಂದು ಆರೋಪಿಸಿದರು. ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯೆಯಾದ ನಸೀಮ್ ಉಡುಪಿ ಹಾಗೂ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಮುಖಂಡರಾದ ಝಮ್ ಝಮ್ ಕಪ್ತಿ ಹಾಗೂ ಅಡ್ವಕೇಟ್ ಶಹನಾಝ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿದಾ ಅಫ್ರಾ ಸ್ವಾಗತಿಸಿ, ಸುಹಾ‌ ನಝ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Also Read  ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು      

error: Content is protected !!
Scroll to Top