(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 02. ಫೆಬ್ರವರಿ 7ರಿಂದ ರಾಜ್ಯ ಬಜೆಟ್ ಪ್ರಾರಂಭಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು, ಕೇಂದ್ರ ಸರಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದನ್ವಯ ರಾಜ್ಯ ಸರಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.