ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ- ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಕಾರು ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಚಾಲಕ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತ ಚಾಲಕನನ್ನು ಶರೀಫ್ ಎಂದು ಗುರುತಿಸಲಾಗಿದೆ. ಇವರು ಕಾರನ್ನು ಚಲಾಯಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿ ನಿಯಂತ್ರಣ ತಪ್ಪಿದ ಕಾರಣ ಬೈಕ್, ಟೆಂಪೋ ಹಾಗೂ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top