ಸುಬ್ರಹ್ಮಣ್ಯ: ನರೇಗಾ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 02. ಕರ್ನಾಟಕ ರಾಜ್ಯ ಮಹಾತ್ಮಾ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ದ.ಕ.ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ನರೇಗಾ ದಿವಸ್ ಆಚರಣೆಯನ್ನು ಬುಧವಾರದಂದು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದಲ್ಲಿ ಆಚರಿಸಲಾಯಿತು.

ಇದರ ಅಧ್ಯಕ್ಷತೆಯನ್ನು ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ವಹಿಸಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ಸುಳ್ಯ ತಾ.ಪಂ ಕಾರ್ಯನಿರ್ವಣಾಧಿಕಾರಿ ಭವಾನಿಶಂಕರ, ಪುತ್ತೂರು ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ, ಮಂಗಳೂರು ತಾ ಪಂ ಕಾರ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಜಿ ನಾಗರಾಜ, ದ ಕ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಶ್ರೀ ನಾಗೇಶ್, ಪುತ್ತೂರು ತಾಲೂಕು ನರೇಗಾ ಸಹಾಯಕ ನಿರ್ದೇಶಕಿ ಶ್ರೀಮತಿ ಶೈಲಜಾ ಭಟ್, ಸುಬ್ರಹ್ಮಣ್ಯ ಗ್ರಾಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ, ಉಪಾಧ್ಯಕ್ಷೆ ಸವಿತಾ ಭಟ್, ಪಿಡಿಒ ಯು ಡಿ ಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಾತ್ಮಾ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ, ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಕಿಶನ್ ಸ್ವಾಗತಿಸಿದರು. ಖಜಾಂಜಿ ವಿನೋದ್ ವಂದಿಸಿದರು. ನರೇಗಾ ಜಿಲ್ಲಾ ಐ ಇ ಸಿ ಸುನೀತಾ ಕಾರ್ಯಕ್ರಮ ನಿರೂಪಿಸಿದರು.

Also Read  ಮೃತಪಟ್ಟ ಸ್ಥಿತಿಯಲ್ಲಿ ಕಾಡಾನೆ ಪತ್ತೆ - ವಿದ್ಯುತ್ ಸ್ಪರ್ಶ ಶಂಕೆ

error: Content is protected !!
Scroll to Top