ಫೆ. 07 ರಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು. ಫೆ. 03. ಕೇಂದ್ರ ಸರ್ಕಾರದ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಶ್ರೀ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಅವರು ಫೆ. 07ರ ಸೋಮವಾರ ಬೆಳಗ್ಗೆ 7 ಗಂಟೆಗೆ ಹಾಸನ ಜಿಲ್ಲೆಯ ಶ್ರವಣಬೆಳಗೊಳ ತಾಲೂಕಿನಿಂದ ರಸ್ತೆಯ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡುವರು. ಮಧ್ಯಾಹ್ನ 1 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಚಿಕ್ಕೋಡಿಗೆ ಹೊರಡುವರು ಎಂದು ಅವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ

error: Content is protected !!
Scroll to Top