(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯವು 2020-21 ನೇ ಸಾಲಿನಲ್ಲಿ ವಿವಿಧ ಪದವಿ ಕೋರ್ಸ್ ಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶ ವಿಳಂಬವಾಗಿ ಪ್ರಕಟವಾದ ಹಾಗೂ ವಿಶೇಷ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಶ್ವವಿದ್ಯಾನಿಲಯದ ಆವರಣ, ಮಂಗಳ ಗಂಗೋತ್ರಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಮಡಿಕೇರಿ, ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾದ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಹ ವಿಧ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು. ಅರ್ಜಿಗಳನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ಮೂಲಕ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಫೆ. 07 ರೊಳಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.