ಮಂಗಳೂರು: ವೇಶ್ಯಾವಾಟಿಕೆ- ಅಪ್ರಾಪ್ತ ವಿದ್ಯಾರ್ಥಿನಿಯರ ರಕ್ಷಣೆ ➤ ಮೂವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತ ಪಿಯುಸಿ ವಿದ್ಯಾರ್ಥಿನಿಯರ ಸಹಿತ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ.

ನಗರದ ಕಾಲೇಜೊಂದರ ಮುಖ್ಯಸ್ಥೆ ಹಾಗೂ ಸಂತ್ರಸ್ತೆ ನೀಡಿದ ದೂರಿನಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಲವು ದಿನಗಳಿಂದ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಯಸ್ಕ ಯುವತಿಯರನ್ನು ನಿರಂತರವಾಗಿ ದಂಧೆಗೆ ಬಳಸಿಕೊಳ್ಳುತ್ತಿರುವುದು ದೃಢಪಟ್ಟಿದೆ ಎಂದು ತಿಳಿಸಿದರು.

Also Read  ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ

ವಿದ್ಯಾರ್ಥಿನಿಯರಿಗೆ ಬೆದರಿಕೆ

ರಕ್ಷಣೆ ಮಾಡಲಾದ ಸಂತ್ರಸ್ತೆಯರು ಪಿಯುಸಿ ವಿದ್ಯಾರ್ಥಿನಿಯರಾಗಿದ್ದು, ತಮ್ಮ ಮೇಲಾದ ದೌರ್ಜನ್ಯವನ್ನು ಕಾಲೇಜಿನ ಮುಖ್ಯಸ್ಥೆಯ ಬಳಿ ಹೇಳಿಕೊಂಡಿದ್ದಾರೆ. ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ವಿದ್ಯಾರ್ಥಿನಿಯರಿಗೆ ವಿಡಿಯೋ ಬಯಲು ಮಾಡಿ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿ ಹೀನ ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿತ್ತು ಎಂದೂ ಸಂತ್ರಸ್ತೆಯರು ತಿಳಿಸಿದ್ದಾರೆ. ಮಹಿಳಾ ಪೊಲೀಸ್ ಠಾಣೆಯ ಸಖಿ ಕೇಂದ್ರದಲ್ಲಿ ಸಂತ್ರಸ್ತ ಬಾಲಕಿಯರಿಗೆ ಕೌನ್ಸಲಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಿದರು.

error: Content is protected !!
Scroll to Top