ಔಷಧಿ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ಕಸ್ತೂರಿ ಮಾತ್ರೆ ಮಾರಾಟ ಮಾಡುತ್ತಾ ಬಂದ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ ಘಟನೆ ಕೊಳಂಬೆ ಗ್ರಾಮದ ಕಜೆಕೋಡಿ ಹೌಸ್ ಬಳಿ ನಡೆದಿದೆ.

ಆರೋಪಿಯನ್ನು ಮುಲ್ಕಿ ಕೆಂಚನಕೆರೆ ನಿವಾಸಿ ಮುಹಮ್ಮದ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ಈತ ಕಜೆಕೋಡಿ ಎಂಬಲ್ಲಿ ಮಾತ್ರೆಗಳನ್ನು ಮಾರಾಟ ಮಾಡುತ್ತಾ ಬಂದು ಮಹಿಳೆಯೋರ್ವರ ಕೈ ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Also Read  ಸುಳ್ಯ: ತಾಲೂಕಿನ ಕೆಲವೆಡೆ ಲಘು ಭೂಕಂಪನ ➤ ಭಯಭೀತಗೊಂಡ ಜನತೆ

error: Content is protected !!
Scroll to Top