ನಾಪತ್ತೆಯಾಗಿದ್ದ ಎಎಸ್ಐ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

(ನ್ಯೂಸ್ ಕಡಬ) newskadaba.com ಕುಶಾಲನಗರ, ಫೆ. 04. ಎಎಸ್ಐ ಅಧಿಕಾರಿಯೋರ್ವರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಾಸನದ ಕೊಣನೂರಿನ ಕೆರೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ.


ಮೃತರನ್ನು ಹಾಸನ ಜಿಲ್ಲೆಯ ಕೊಣನೂರು ಸಿದ್ದಾಪುರ ಗೇಟ್ ನವರಾದ ಎಎಸ್ಐ ಸುರೇಶ್ ಎಂದು ಗುರುತಿಸಲಾಗಿದೆ. ಇವರು ಕುಶಾಲನಗರ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗು ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ತವ್ಯದ ನಿಮಿತ್ತ ಮನೆಯಿಂದ ಹೊರಹೋದವರು ಅತ್ತ ಠಾಣೆಗೂ ಹೋಗದೇ ಇತ್ತ ಮನೆಗೂ ಬಾರದೇ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಪತ್ನಿ ಕುಶಾಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಹುಡುಕಾಟ ನಡೆಸಿದಾಗ ಸಮೀಪದ ಕೆರೆಯೊಂದರಲ್ಲಿ ಸುರೇಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತಪಡಿಸಲಾಗಿದೆ.

Also Read  ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..!

error: Content is protected !!
Scroll to Top