ಮಾದಕ ವಸ್ತು ಮಾರಾಟಕ್ಕೆ ಯತ್ನ ➤ ಎಂಡಿಎಂಎ ಸಹಿತ ಆರೋಪಿ ವಶಕ್ಕೆ



(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಕಾಸರಗೋಡಿನಿಂದ ಮಂಗಳೂರಿಗೆ ಮಾದಕ ವಸ್ತು ಎಂಡಿಎಂಎ ನ್ನು ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.








ಬಂಧಿತ ಆರೋಪಿಯನ್ನು ಕಾಸರಗೋಡಿನ ಅಬ್ದುಲ್ ರಹ್ಮಾನ್ ಎಂದು ಗುರುತಿಸಲಾಗಿದೆ. ಈತನಿಂದ 75,000 ರೂ. ಮೌಲ್ಯದ ಎಂಡಿಎಂಎ ಹಾಗೂ ಸಾಗಾಟ ಮಾಡಲು ಬಳಸಿದ ಕಾರು ಸಹಿತ ಒಟ್ಟು 3,30,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.‌ ಅಬಕಾರಿ ಅಧಿಕಾರಿಗಳು ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಕಾರೊಂದು ರಸ್ತೆ ಬದಿ ನಿಲ್ಲಿಸಿರುವುದನ್ನು ಕಂಡು ತಪಾಸಣೆ ನಡೆಸಿದಾಗ ಮಾದಕ ವಸ್ತು ಮಾರಾಟಕ್ಕೆ ತಂದಿರುವ ಬಗ್ಗೆ ತಿಳಿದುಬಂದಿದೆ.






error: Content is protected !!
Scroll to Top