ಆಟೋರಿಕ್ಷಾ- ಕಾರು ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 07. ಕಾರು ಹಾಗೂ ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಹಿಳೆ ಮೃತಪಟ್ಟ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿ ಎಂಬಲ್ಲಿ ಸಂಭವಿಸಿದೆ.

ಮೃತ ಮಹಿಳೆಯನ್ನು ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಭೋಜ ಮೂಲ್ಯ ಎಂಬವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top