ಮಂಗಳೂರು: ದುಷ್ಕರ್ಮಿಗಳಿಂದ ಯುವಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಯುವಕನೋರ್ವನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಇಬ್ರಾಹೀಂ ಹರ್ಷದ್ (31) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರರಿಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಗಾಯಾಳು ಯುವಕ‌ ಆರೋಪಿಸಿದ್ದಾರೆ. ಗಾಯಾಳು ಯುವಕ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟುನಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  Новое казино 1Win для игры на деньги - Акции и бонусы казино

 

 

error: Content is protected !!
Scroll to Top