ಪತ್ರಕರ್ತ ಬಿ.ಟಿ ರಂಜನ್ ರಿಗೆ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಅಗಲಿದ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿಂದು ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಂಜನ್ ಸುಮಾರು ಮೂವತ್ತೈದು ವರ್ಷಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಪತ್ರಿಕಾರಂಗಕ್ಕೆ ಗಮನಾರ್ಹ ಸೇವೆ ಸಲ್ಲಿಸಿದವರು ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಸಂತಾಪ ಸೂಚಿಸಿದರು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ, ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ, ರವಿ ಪೊಸವಣಿಕೆ, ಶೇಖ್ ಜೈನುದ್ದೀನ್ ನುಡಿನಮನ ಸಲ್ಲಿಸಿದರು.

Also Read  ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

 

error: Content is protected !!
Scroll to Top