ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ನ.8. ► ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸುವ ಬಗ್ಗೆ ” ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಸರೋಳಿ ಹಾಗೂ ಸುಮಂತ್.ಕೆ ಸಂಶೋಧನೆ ನಡೆಸಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ನಡೆದ “INSEF”- ಪ್ರಾದೇಶಿಕ ಮಟ್ಟದ ವಿಜ್ಙಾನಮೇಳದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ವಿಜ್ಞಾನ ಶಿಕ್ಷಕಿಯರಾದ ಪವಿತ್ರ ಹಾಗೂ ರಶ್ಮಿ ಸಹಕರಿಸಿದ್ದಾರೆ ಹಾಗೂ ಶಾಲಾ ಮುಖ್ಯಗುರು ಸತೀಶ್ ಭಟ್ ಹಾಗೂ ಶಾಲಾ ಶಿಕ್ಷಕ ವೃಂದದವರು ಪ್ರೋತ್ಸಾಹ ನೀಡಿದ್ದಾರೆ.

error: Content is protected !!

Join the Group

Join WhatsApp Group