ಮದ್ರಸಾ ಶಿಕ್ಷಕನಿಂದ ಲೈಂಗಿಕ ಕಿರುಕುಳ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 08. ಮದ್ರಸಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದ್ರಸಾ ಗುರುಗಳಾದ ಸಿರಾಜುದ್ದೀನ್ ಮದನಿ ಎಂಬಾತನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ, ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕುಂಡಡ್ಕದ ಮದ್ರಸಾದಲ್ಲಿ ಶಿಕ್ಷಣ ಪಡೆಯುತ್ತಿರುವ ಹೆಣ್ಮಕ್ಕಳಿಬ್ಬರು ಮನೆಗೆ ಹೋಗಿ ತಮ್ಮ ಮೇಲೆ ಉಸ್ತಾದ್ ಲೈಂಗಿಕ ದೌರ್ಜನ್ಯವೆಸಗುತ್ತಿರುವ ಬಗ್ಗೆ ತಾಯಿಗೆ ತಿಳಿಸಿದ್ದರು. ಈ ನಿಟ್ಟಿನಲ್ಲಿ ಹೆಣ್ಮಕ್ಕಳ ತಾಯಿಯು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಳೆದ ಒಂದು ವರ್ಷದಿಂದ ಉಸ್ತಾದರು ಈ ರೀತಿ ಅಸಭ್ಯವಾಗಿ ವರ್ತಿಸಿರುವುದಾಗಿ ಹೆಣ್ಣು ಮಕ್ಕಳು ನೀಡಿರುವ ದೂರಿನಲ್ಲಿ ತಿಳಿಸಲಾಗಿತ್ತು. ಮೂಲತಃ ಉರುವಾಲುಪದವು ನಿವಾಸಿಯಾಗಿರುವ ಉಸ್ತಾದ್ ಸಿರಾಜುದ್ದೀನ್ ಮದನಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Also Read  ಬಂಟ್ವಾಳ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮುನ್ನಡೆ

error: Content is protected !!
Scroll to Top