ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಲತಾ ಬಿ. ► ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.8.  ಪ.ಪೂ.ಶಿಕ್ಷಣ ಇಲಾಖೆ ವತಿಯಿಂದ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಲತಾ ಬಿ.,ಇವರು 100 ಮೀ., 200 ಮೀ., ಓಟದಲ್ಲಿ ಪ್ರಥಮ ಹಾಗೂ 400 ಮೀ.ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ.ತರಬೇತಿ ನೀಡಿದ್ದಾರೆ.

error: Content is protected !!

Join the Group

Join WhatsApp Group