Breaking News ನಾಳೆಯಿಂದ ಮೂರು ದಿನಗಳ ಕಾಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 08. ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್- ಕೇಸರಿ ಶಾಲು ವಿವಾದದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಶಾಲೆ- ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಹೈಕೋರ್ಟ್ ನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಇಡೀ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಣೆ ಮಾಡಲಾಗಿದೆ ಎಂದರು.

Also Read  ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..!

error: Content is protected !!
Scroll to Top