ರಸ್ತೆಯಲ್ಲೇ ಸುಟ್ಟು ಭಸ್ಮವಾದ ಸಿಮೆಂಟ್ ಸಾಗಾಟದ ಲಾರಿ ➤ ಶಾರ್ಟ್ ಸರ್ಕ್ಯೂಟ್ ಶಂಕೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಸಿಮೆಂಟ್ ಸಾಗಾಟದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳೂರು- ಬೆಂಗಳೂರು ರಾ.ಹೆ 75ರ ಬಜತ್ತೂರು ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ವಾಹನದೊಳಗೆ ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರ್ಘಟನೆ ನಡೆದಿದೆ. ಬೆಂಕಿ ಹೊತ್ತಿದ ತಕ್ಷಣವೇ ಚಾಲಕ ಲಾರಿಯನ್ನು ನಿಲ್ಲಿಸಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ

error: Content is protected !!
Scroll to Top