ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.8. ಕಾಂಗ್ರೆಸ್ ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯಿತು. ಕೊೖಲ ಗ್ರಾಮದ ಬೂತ್ ನಂ.1ರ ಶಕ್ತಿನಗರ ಅಬೂಬಕ್ಕರ್ರವರ ಮನೆಯಲ್ಲಿ, ಬೂತ್ ನಂ.2ರ ಆತೂರು ಬೈಲು ಬಿಪಾತುಮರವರು ಮನೆಯಲ್ಲಿ ಹಾಗೂ ವಳಕಡಮ ಭಜನಾ ಮಂದಿರದ ಬಳಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಉದ್ಘಾಟಿಸಿ ಚಾಲನೆ ನೀಡಲಾಯಿತು.

ದ.ಕ.ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಗೌಡರವರು ಉದ್ಘಾಟಿಸಿ ಮಾತನಾಡಿ, ಕಳೆದ ನಾಲ್ಕುವರೇ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಹಲವು ಯೋಜನೆ ಜಾರಿಗೊಳಿಸಿದೆ. ರಾಜ್ಯದ ಪ್ರತಿ ಮನೆಗಳಲ್ಲೂ ಸರಕಾರದ ಯೋಜನೆಗಳ ಫಲಾನುಭವಿಗಳಿದ್ದಾರೆ. ಕಾರ್ಯಕರ್ತರು ಮನೆ ಮನೆ ಅಭಿಯಾನದ ವೇಳೆ ಸರಕಾರದ ಸಾಧನೆಗಳನ್ನು ಎಲ್ಲರಿಗೂ ಮನದಟ್ಟು ಮಾಡಬೇಕು. ಈ ಮೂಲಕ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಜಯಭೇರಿಗಳಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರುವಲ್ಲಿ ಶ್ರಮಿಸಬೇಕೆಂದು ಹೇಳಿದರು.

Also Read  ವಶೀಕರಣ ತಂತ್ರ ಮತ್ತು ದಿನ ಭವಿಷ್ಯ

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಡಾ.ರಘು, ರಾಮಕುಂಜ ಗ್ರಾ.ಪಂ.ಸದಸ್ಯ ಯತೀಶ್ ಬಾನಡ್ಕ, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಕೇಶವ ಗೌಡ ಪುಚ್ಚೇರಿ, ಕೊೖಲ ಗ್ರಾಮ ಸಮಿತಿ ಅಧ್ಯಕ್ಷ ಅಬ್ದುಲ್ ಬಶೀರ್, ಕಾರ್ಯದರ್ಶಿ ರಫೀಕ್, ಬೂತ್ ಸಮಿತಿ ಅಧ್ಯಕ್ಷ ಎಸ್.ಅಬ್ದುಲ್ ರಹಿಮಾನ್, ಕೊೖಲ ಗ್ರಾ.ಪಂ.ಸದಸ್ಯರಾದ ಬೀಪಾತುಮ, ಕೆ.ಎ.ಸುಲೈಮಾನ್, ನಝೀರ್ ಪೂರಿಂಗ, ನಾರಾಯಣ ಗೌಡ ವಳಕಡಮ, ವಸಂತ ಗುಂಡಿಜೆ, ಸುಬ್ರಹ್ಮಣ್ಯ ಗೌಡ ವಳಕಡಮ, ಅಝೀಝ್ ಕೋಲ್ಪೆ ಮತ್ತಿತರರು ಉಪಸ್ಥಿತರಿದ್ದರು.

Also Read  ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್

error: Content is protected !!
Scroll to Top