ಹಿಜಾಬ್ / ಕೇಸರಿ ಶಾಲು ವಿವಾದ ➤ ಡಿಸಿ- ಎಸ್ಪಿಗಳ ಜೊತೆ ಸಿಎಂ‌ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 11. ರಾಜ್ಯಾದ್ಯಂತ ಭುಗಿಲೆದ್ದಿದ್ದ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ ಡಿಸಿ ಹಾಗೂ ಎಸ್ಪಿ ಗಳ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಸಭೆ ಶುಕ್ರವಾರ ಸಂಜೆ ಆರು ಗಂಟೆಗೆ ನಡೆಸಲಿದ್ದಾರೆ.

ಇಂದು ಸಂಜೆ ಸಿಎಂ ಗೃಹದಲ್ಲಿ ನಡೆಯಲಿರುವ ಈ ಸಬೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಹಿಜಾಬ್ ವಿವಾದವಾಗಿ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ವಿದ್ಯಾರ್ಥಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ಪೂರ್ಣಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಅದುವರೆಗೆ ಶಾಲಾ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸದಂತೆ ಸೂಚನೆ ನೀಡಿದೆ. ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪರಿಗಣಿಸಿ ಸಿಎಂ, ಶಿಕ್ಷಣ ಸಚಿವ ಬಿಸಿ ನಾಗೇಶ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಸಭೆ ನಡೆಸಿ ಹೈಸ್ಕೂಲ್ ಪ್ರಾರಂಭಕ್ಕೆ ಅವಕಾಶ ನೀಡಿದ್ದಾರೆ‌. ನಂತರದ ಪರಿಸ್ಥಿತಿಯನ್ನು ಆಧರಿಸಿ ಪಿಯು ಮತ್ತು ಪದವಿ ತರಗತಿಗಳು ಆರಂಭಿಸುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸೂಚನೆ ನೀಡಲಿದ್ದಾರೆ.

Also Read  ಕೆಎಸ್ಸಾರ್ಟಿಸಿ ರಾಜ್ಯದ ಕೈ ತಪ್ಪಿಲ್ಲ... ಇದು ನಮ್ಮದೇ ಆಸ್ತಿ..! ➤ KSRTC ಎಂಡಿ ಸ್ಪಷ್ಟನೆ

error: Content is protected !!
Scroll to Top