ಉಳ್ಳಾಲ ಉರೂಸ್ ಹಿನ್ನೆಲೆ ➤ ಮಾ. 06ರವರೆಗೆ ರಾತ್ರಿ ಬೀಚ್ ಪ್ರವೇಶಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 11. ಉಳ್ಳಾಲದ ಸೈಯದ್ ಮದನಿ ದರ್ಗಾದಲ್ಲಿ ಫೆ. 10ರಿಂದ ಮಾರ್ಚ್ 06ರ ವರೆಗೆ ವಾರ್ಷಿಕ ಉರೂಸ್ ನಡೆಯುವುದರಿಂದ ಸಂಜೆ ಐದರಿಂದ ಬೆಳಗ್ಗೆ 6 ಗಂಟೆಯವರೆಗೆ ಉಳ್ಳಾಲ ಮತ್ತು ಸೋಮೇಶ್ವರ ಬೀಚ್ ಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಉರೂಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿರುವ ಹಿನ್ನೆಲೆ ಸ್ಥಳದಲ್ಲಿ ಜಾಗರಣೆ ಮಾಡಲಾಗುತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಲಾಗಿದೆ. ಉಳ್ಳಾಲ, ಉಳಿಯ, ನೆಹರೂ ನಗರ, ಸೋಮೇಶ್ವರ, ಉಚ್ಚಿಲ, ಮೊಗವೀರಪಟ್ಣ, ಪೆರಿಬೈಲ್, ಬಟ್ಟಪ್ಪಾಡಿ ಬೀಚ್‌ಗಳಲ್ಲಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ. ಕೋವಿಡ್ ನಿಯಮ ಪಾಲಿಸುವದನ್ನು ಮೇಲ್ವಿಚಾರಣೆ ಮಾಡಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರನ್ನು ಸೆಕ್ಟರ್ ಮ್ಯಾಜಿಸ್ಟ್ರೇಟ್ ಆಗಿ ನೇಮಿಸಲಾಗಿದೆ.

Also Read  2021-22 ನೇ ಸಾಲಿನ ವಿವಿಧ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆ ಹಾಗೂ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

error: Content is protected !!
Scroll to Top