ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರಿಂದ ಪಥಸಂಚಲನ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಧೈರ್ಯ ಮೂಡಿಸಲು ಪೊಲೀಸರು ರಾಜ್ಯದಾದ್ಯಂತ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು, ಹೋಬಳಿಗಳಲ್ಲಿ ಶುಕ್ರವಾರ ಪಥ ಸಂಚಲನ ನಡೆಸಿದರು.

ಪೋಲೀಸ್ ಇಲಾಖೆ ಇದೀಗ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಪ್ರಮುಖ ಸ್ಥಳಗಳಲ್ಲಿ ಪಥಸಂಚಲನ ನಡೆಸುತ್ತಿದ್ದು, ಪುತ್ತೂರು ನಗರದಲ್ಲಿ ಡಿವೈಎಸ್ಪಿ ಗಾನಾ ಕುಮಾರ್ ನೇತೃತ್ವದಲ್ಲಿ ಪುತ್ತೂರಿನ ದರ್ಬೆ ವೃತ್ತದಿಂದ ಬೊಳುವಾರು ತನಕ ಮಾರ್ಚ್ ಮಾಡಿದ ಪೋಲೀಸರು ಯಾವುದೇ ಸನ್ನಿವೇಶಕ್ಕೂ ಪೋಲೀಸರು ಸಿದ್ಧ ಎನ್ನುವುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿದರು.

Also Read  ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ

error: Content is protected !!
Scroll to Top