ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕೃಷ್ಣಮೂರ್ತಿ ಹೆಚ್.ಕೆ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣಮೂರ್ತಿ ಹೆಚ್.ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ.


ಪುತ್ತೂರಿನಲ್ಲಿ ಹಿರಿಯ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಮಂಗಳೂರು ವಿದ್ಯುತ್ ಪ್ರಸರಣ ನಿಗಮ(ಮೆಸ್ಕಾಂ)ದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದರು. ಬಳಿಕ ಉತ್ತರ ಕನ್ನಡ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

Also Read  ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

error: Content is protected !!
Scroll to Top