ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ್ ಎಂ.ಎಸ್. ನಿಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.12. ಹಿರಿಯ ಛಾಯಾಗ್ರಾಹಕ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್. ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ.

ಕಡಬದಲ್ಲಿ ಪ್ರಥಮವಾಗಿ ಪೋಟೋ ಸ್ಟುಡಿಯೋ ಪ್ರಾರಂಭಿಸಿ, ದ.ಕ.ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು, ಜೇಸಿ, ಲಯನ್ಸ್ ಸೇರಿದಂತೆ ವಿವಿಧ ಸಂಘಸಂಸ್ಥೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಹಲವಾರು ವರ್ಷಗಳಿಂದ ಕಡಬ ವರ್ತಕ ಸಂಘದ ಅಧ್ಯಕ್ಷರಾಗಿದ್ದಾರೆ. ಇವರು ಕಳೆದ ಕೆಲವು ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಕಡಬ ಗ್ರಾ.ಪಂ.ಮಾಜಿ ಅಧ್ಯಕ್ಷೆ ನೀಲಾವತಿ ಶಿವರಾಮ್ ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ.

Also Read  ಕಡಬ ಗೃಹರಕ್ಷಕದಳದ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ ಚೂಂತಾರು ಭೇಟಿ ಮುಖ್ಯ ಮಂತ್ರಿ ಪದಕ ಪುರಸ್ಕೃತ ಜಿಲ್ಲಾ ಕಮಾಂಡೆಂಟ್ ಅವರಿಗೆ ಕಡಬ ಘಟಕದಿಂದ ಸನ್ಮಾನ

 

 

 

error: Content is protected !!
Scroll to Top