ಪ್ರತ್ಯೇಕ ಪ್ರಕರಣ; ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ➤ ಇಬ್ಬರ ಬಂಧನ…!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ.


ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ರೆಂಜಲಾಡಿಯ ಇಬ್ರಾಹಿಂ ಬಾತಿಷ್ ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ನಗರದ ಕೋಡಿಕಲ್ ಸರಕಾರಿ ಶಾಲೆಯ ಬಳಿ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆಯ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ವರ್ಶಿತ್ ಎಂಬಾತನನ್ನು ಸೆನ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮಂಗಳೂರು: ಹೋಟೆಲ್ ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿ ➤ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

error: Content is protected !!
Scroll to Top