ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಕಡಬ, ನ.8. ತಣ್ಣೀರುಪಂತ ಶ್ರೀ ಶಾರದಾಂಬಾ ಭಜನಾ ಮಂದಿರ ಹಾಗೂ ಪುತ್ತಿಲ ದೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದ ಆಶ್ರಯದಲ್ಲಿ ತನಿಯಪ್ಪ ಹಳೆಕೋಟೆ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಗಮಿಸಿದ 59 ಮಂದಿ ಪಾದಯಾತ್ರಿಕರಿಗೆ ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸ್ವಾಗತ ಕೋರಲಾಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಪಾದಯಾತ್ರಿಕರನ್ನು ಭಜನಾ ಮಂದಿರಕ್ಕೆ ಬರಮಾಡಿಕೊಂಡು ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಯಿತು. ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷರಾದ ಜನಾರ್ದನ ಶೆಟ್ಟಿಯವರು ಭೋಜನದ ವ್ಯವಸ್ಥೆ ಮಾಡಿದ್ದರು.

Also Read  ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪಿಎಂ ನರೇಂದ್ರ ಮೋದಿ ಸಭೆ

ಭಜನಾ ಮಂದಿರದ ಅಧ್ಯಕ್ಷ ಈಶ್ವರ ಗೌಡ, ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷ ಜನಾರ್ದನ ಶೆಟ್ಟಿ, ಸ್ಥಳೀಯರಾದ ಹರೀಶ್ ಗಾಣಾಜಾಲ್, ನೇಮಿರಾಜ ಶೇಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.

error: Content is protected !!
Scroll to Top