ಬಂಟ್ವಾಳ: ಮಹಿಳೆಯ ಮಾನಭಂಗಕ್ಕೆ ಯತ್ನ..! ➤ ಆರೋಪಿ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಮನೆಗೆ ನುಗ್ಗಿ ಮಹಿಳೆಯೋರ್ವಳ ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆಗೆ ಸಂತ್ರಸ್ತ ಮಹಿಳೆ ಆರೋಪಿ ವಿರುದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಳೆದು ಒಂದು ವರ್ಷಗಳ ಹಿಂದೆ ಪರಿಚಯವಾದ ಮಂಚಿ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಪದೇ ಪದೇ ಪೋನ್ ಮಾಡಿ ಅಸಹ್ಯವಾಗಿ ಮಾತನಾಡುತ್ತಿದ್ದುದಲ್ಲದೇ ಕರೆ ಸ್ವೀಕರಿಸಿದೇ ಇದ್ದಾಗ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದನು. ಜೊತೆಗೆ ವಿಡಿಯೋ ಕಾಲ್ ಮಾಡುವಂತೆಯೂ ಒತ್ತಾಯಿಸುತ್ತಿದ್ದ. ಅಲ್ಲದೇ ಜನವರಿ 25 ರಂದು ಯುವತಿಯ ಮನೆಗೆ ಬಂದ ಆರೋಪಿ, ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಆತನ ಕೈಯಿಂದ ತಪ್ಪಿಸಿಕೊಂಡು ಮನೆಯಿಂದ ಹೊರಗೆ ಓಡಿ ಹೋಗಿರುವುದಾಗಿ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

Also Read  ಪುತ್ತೂರು: ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ ➤ ಓರ್ವನಿಗೆ ಗಾಯ

error: Content is protected !!
Scroll to Top