“ಪದ್ಮಶ್ರೀ” ತಿರಸ್ಕರಿಸಿದ ಗಾಯಕಿ ಸಂಧ್ಯಾ ಮುಖರ್ಜಿ ಹೃದಯಾಘಾತದಿಂದ ನಿಧನ..!

(ನ್ಯೂಸ್ ಕಡಬ) newskadaba.com ಕೋಲ್ಕತಾ, ಫೆ. 16. ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದ ಪಶ್ಚಿಮ ಬಂಗಾಳದ ಖ್ಯಾತ ಗಾಯಕಿ ಸಂಧ್ಯಾ ಮುಖರ್ಜಿ (90) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.


ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾರತೀಯ ಸಿನಿಮಾದ ಸಾವಿರಾರು ಹಾಡಿಗೆ ಧ್ವನಿಯಾಗಿದ್ದ ಇವರು ಹಲವು ಆಲ್ಬಂಗಳನ್ನು ಹೊರತಂದಿದ್ದರು. 1979ರಲ್ಲಿ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದರು. ಇತ್ತೀಚೆಗೆ ಕೇಂದ್ರ ಸರಕಾರವು ದೇಶದ ನಾಲ್ಕನೇ ಅತಿದೊಡ್ಡ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಘೋಷಣೆ ಮಾಡಿದ್ದು, ಆದರೆ ಅದನ್ನು ಸಂಧ್ಯಾ ಮುಖರ್ಜಿಯವರು ನಿರಾಕರಿಸಿದ್ದರು.

Also Read  ಅಳಿವಿನಂಚಿನಲ್ಲಿರುವ ಹಿಮಚಿರತೆಗಳ ಸಂಖ್ಯೆ ಏರಿಕೆ

error: Content is protected !!
Scroll to Top