ಕಡಬ: ಅಕ್ರಮ ದನ ಸಾಗಾಟ ➤ ಇಬ್ಬರ ಬಂಧನ..!

(ನ್ಯೂಸ್ ಕಡಬ) newskadaba.com ಕಡಬ, ಫೆ. 17. ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಿದ ಘಟನೆ ಕಡಬದಲ್ಲಿ ನಡೆದಿದೆ.

ಬಂಧಿತರನ್ನು ರವಿ ಹಾಗೂ ಅಬ್ದುಲ್ ಅಝೀಝ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕುಟ್ರುಪಾಡಿ ಗ್ರಾಮದ ಕೇಪು ಎಂಬಲ್ಲಿ ಪಿಕಪ್ ವಾಹನದಲ್ಲಿ ಜಾನುವಾರೊಂದನ್ನು ನೆಲ್ಯಾಡಿ ಕಡೆಗೆ ಸಾಗಿಸುತ್ತಿದ್ದ ಸಂದರ್ಭ ಗಸ್ತುನಿರತ ಹೊಯ್ಸಳ ಪೊಲೀಸರು ಪಿಕಪ್ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top