ಆರೋಪಿಯ ಬಂಧಿಸಲೆತ್ನಿಸಿದ ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಕಾಸರಗೋಡು ಮೂಲದ ವ್ಯಕ್ತಿಯೋರ್ವ ಕದ್ದ ವಾಚ್‌ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮಾಹಿತಿಯನ್ನು ಖಚಿತಪಡಿಸಿಕೊಂಡ ಆತನನ್ನು ಬಂಧಿಸಲೆಂದು ಬಂದ ಮಂಗಳೂರು ಉತ್ತರ ಠಾಣಾ ಪೊಲೀಸ್‌ ಸಿಬ್ಬಂದಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ನಡೆದಿದೆ.

 

 

ವ್ಯಕ್ತಿಯೋರ್ವ ಮಂಗಳೂರಿನ ದುಬೈ ಬಜಾರ್​ನಲ್ಲಿ ಅನುಮಾನಾಸ್ಪದವಾಗಿ ದುಬಾರಿ ವಾಚ್​ ಮಾರಾಟ ಮಾಡಲು ಬಂದಿದ್ದ ವೇಳೆ ಅನುಮಾನಗೊಂಡ ಅಂಗಡಿ ಮಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕಾಗಮಿಸಿದ ಪೊಲೀಸರು ವ್ಯಕ್ತಿಯನ್ನು ಹಿಡಿಯಲೆತ್ನಿಸಿದಾಗ ಆರೋಪಿ ತಪ್ಪಿಸುವ ಭರದಲ್ಲಿ ಪೊಲೀಸ್ ಸಿಬ್ಬಂದಿ ವಿನೋದ್‌ ಅವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಈ ಕುರಿತು ಬಂದರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು

 

 

error: Content is protected !!
Scroll to Top