ಉಕ್ರೇನ್ – ರಷ್ಯಾ ನಡುವೆ ಸಮರ ➤ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ 91 ವಿದ್ಯಾರ್ಥಿಗಳು…!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 25. ಉಕ್ರೇನ್ ಮತ್ತು ರಷ್ಯಾ ಯುದ್ಧದ ನಡುವೆ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ವಿವಿಧ ಜಿಲ್ಲೆಯ 91 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರಿ ಡಾ. ಮನೋಜ್ ರಾಜನ್ ಅವರು ಮಾಹಿತಿ ನೀಡಿದ್ದಾರೆ.

ಖಾರಿವ್‌ ನ್ಯಾಷನಲ್‌ ಮೆಡಿಕಲ್‌ ವಿವಿಯ ವಿದ್ಯಾರ್ಥಿಗಳ ಸಹಿತ ಕೆಲವು ಕನ್ನಡಿಗ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ತಾಯ್ನಾಡಿಗೆ ಬರಲು ಹರಸಾಹಸ ಪಡುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳು ರಕ್ಷಣೆಗಾಗಿ ಮೊರೆಯಿಡುತ್ತಿದ್ದು, ಕೆಲವರು ಬಂಕರ್ಸ್‌ಗಳಲ್ಲಿ ರಕ್ಷಣೆ ಪಡೆದಿದ್ದಾರೆ.

Also Read  ಉಪಗ್ರಹಗಳ ಅನ್‌ಡಾಕ್ ಕಾರ್ಯ ಯಶಸ್ವಿ- ಇಸ್ರೋ ಮತ್ತೊಂದು ಸಾಧನೆ

 

error: Content is protected !!
Scroll to Top